ಬೆಂಗಳೂರು : ಕೊರೊನಾ ಸಂಬಂಧ ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಈ ಸಭೆಯಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸಲಾಗುವುದು. ಬ್ಲ್ಯಾಂಕ್ ಫಂಗಸ್ ನಿಯಂತ್ರಣದ ಬಗ್ಗೆಯೂ ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ತನಿಖಾ ಹಂತದಲ್ಲಿ ಮಾತಾಡೋದು ಸರಿಯಲ್ಲ ಎಂದು ಗೃಹ ಸಚಿವ ಬೊಮ್ಮಾಯಿ ಅವರು ಹೇಳಿದ್ದಾರೆ.