Publish Date: Thu, 04 Jun 2020 (17:53 IST)
Updated Date: Thu, 04 Jun 2020 (17:55 IST)
ಮತ್ತೆ ಇಬ್ಬರು ಪೊಲೀಸ್ ಕಾನ್ಸಟೇಬಲ್ ಗಳಿಗೆ ಕೊರೊನಾ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವವರಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿನ ಮತ್ತೆ ಇಬ್ಬರು ಕಾನ್ ಸ್ಟೇಬಲ್ ಗಳಿಗೆ ಕೋವಿಡ್ ತಗುಲಿರುವ ಶಂಕೆಯಿದ್ದು, ನಗರದ ಪಶ್ಚಿಮ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ.
ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರಕ್ಕೆ ಕಾನ್ ಸ್ಟೇಬಲ್ ಗಳನ್ನು ನಿಯೋಜಿಸಲಾಗಿತ್ತು. ಮಹಾರಾಷ್ಟ್ರದಿಂದ ಬಂದಿದ್ದ ಜನರು ಈ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಈ ಕುರಿತು ಅಧಿಕೃತ ಮಾಹಿತಿಯನ್ನು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸುವುದು ಬಾಕಿ ಇದೆ.