ಬೆಂಗಳೂರು ; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಕೊರೊನಾ ಟೆಸ್ಟ್ ನ್ನು ಕಡ್ಡಾಯಗೊಳಿಸಲಾಗಿದೆ.
ಸಂಪರ್ಕಿತರಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಗೊಳಿಸಲಾಗಿದೆ. ಪ್ರಾಥಮಿಕ-ದ್ವಿತೀಯ ಸಂಪರ್ಕಿತರಿಗೆ ಪರೀಕ್ಷೆ ಮಾಡಿಸಲಾಗುವುದು, ಜ್ವರ, ಉಸಿರಾಟದ ತೊಂದರೆ ಇದ್ದವರು ಪರೀಕ್ಷೆಗೆ ಒಳಪಡಬೇಕು. ಎಂದು ಆರೋಗ್ಯ ಇಲಾಖೆ ಆದೇಶಿಸಿದೆ.
ಒಂದು ವೇಳೆ ಪರೀಕ್ಷೆ ಮಾಡಿಸಿಕೊಳ್ಳಲು ಒಪ್ಪದವರಿಗೆ 50 ಸಾವಿರ ರೂ. ದಂಡ ಹಾಗೂ 6ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲಾಗುವುದು.