ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
ದೇವೇಗೌಡರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು ಆ ವೇಳೆ ವರದಿಯಲ್ಲಿ ಪಾಸಿಟಿವ್ ಬಂದಿದೆ. ಬಳಿಕ ಅವರ ಪತ್ನಿ ಚನ್ನಮ್ಮ ಅವರನ್ನು ಟೆಸ್ಟ್ ಗೆ ಒಳಪಡಿಸಲಾಗಿದ್ದು, ಅವರಿಗೂ ಕೂಡ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಹಾಗಾಗಿ ಅವರಿಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.