ರಾಜ್ಯದ ಪ್ರಸಿದ್ಧ ದೇವಾಲಯಗಳಲ್ಲೊಂದಾದ ಶಿರಸಿಯ ಮಾರಿಕಾಂಬಾ ದೇವಾಲಯದ ಸಿಬ್ಬಂದಿಗೆ ಕೊರೊನಾ ವೈರಸ್ ಹರಡಿದೆ ಎಂಬ ಸುದ್ದಿ ಹರಡಿಸಲಾಗುತ್ತಿದೆ.
ಆದರೆ ದೇವಾಯಲದ ಯಾವೊಬ್ಬ ಸಿಬ್ಬಂದಿಗೂ ಕೋವಿಡ್-19 ಸೋಂಕು ತಗುಲಿಲ್ಲ ಎಂದು ದೇವಾಲಯದ ಅಧ್ಯಕ್ಷ ಡಾ. ವೆಂಕಟೇಶ ನಾಯ್ಕ ತಿಳಿಸಿದ್ದಾರೆ.
ದೇವಾಲಯದ ಸಿಬ್ಬಂದಿಗಳಲ್ಲಿ 5 ಜನರಿಗೆ ಕರೋನಾ ವೈರಸ್ ಸೋಂಕು ತಗುಲಿದೆ ಎಂಬುದು ಸುಳ್ಳು ಸುದ್ದಿ ಎಲ್ಲೆಡೆ ಹರಡುತ್ತಿದೆ.
ಆದರೆ ದೇವಸ್ಥಾನದಲ್ಲಿ ಕಾರ್ಯುನಿರ್ವಹಿಸುವ ನೌಕರರು, ಅರ್ಚಕರು, ಸಿಬ್ಬಂದಿಗಳನ್ನು ಮುಂಜಾಗ್ರತಾ ಕ್ರಮವಾಗಿ ಜುಲೈ 06 ರಂದು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ದೇವಸ್ಥಾನದಿಂದ ಪರೀಕ್ಷೆಗೆ ಒಳಪಡಿಸಿದ ಎಲ್ಲಾ ವ್ಯಕ್ತಿಗಳು ಸುರಕ್ಷಿತವಾಗಿದ್ದಾರೆ ಹಾಗೂ ಯಾರಿಗೂ ಸೋಂಕು ತಗುಲಿರುವುದಿಲ್ಲ ಎಂದು ವರದಿ ನೀಡಿರುತ್ತಾರೆ.
ಆದುದರಿಂದ ದೇವಸ್ಥಾನದ ಸಿಬ್ಬಂದಿಗೆ ಕೊರೊನಾ ವೈರಸ್ ತಗುಲಿದೆ ಎಂಬ ಸುಳ್ಳು ಸುದ್ದಿಗೆ ಯಾರೂ ಕಿವಿಗೊಡಬಾರದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.