Publish Date: Fri, 27 Mar 2020 (19:12 IST)
Updated Date: Fri, 27 Mar 2020 (19:13 IST)
ಮಹಾಮಾರಿ ಕೊರೊನಾ ವೈರಸ್ ದಾವಣಗೆರೆಯ ಯುವಕನೊಬ್ಬನಲ್ಲಿ ಕಾಣಿಸಿಕೊಂಡಿದೆ.
ದಾವಣಗೆರೆಯಲ್ಲಿ ಮೊದಲ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.
ಮಾರ್ಚ್ 22 ರಂದು ಫ್ರಾನ್ಸ್ ನಿಂದ ದಾವಣಗೆರೆಗೆ ಆಗಮಿಸಿದ್ದ ಯುವಕನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಯುವಕನನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಯುವಕನ ಸಂಪರ್ಕದಲ್ಲಿದ್ದ 18 ಜನರ ಮೇಲೆ ನಿಗಾವಹಿಸಲಾಗಿದೆ ಎಂದಿದ್ದಾರೆ.