Publish Date: Mon, 23 Aug 2021 (10:02 IST)
Updated Date: Mon, 23 Aug 2021 (10:06 IST)
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ 9,10 ಮತ್ತು ಪಿಯುಸಿ ತರಗತಿಗಳು ಆರಂಭವಾಗುತ್ತಿದ್ದು, ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸದ್ಯ ಕೊರೊನಾ ಸೋಂಕಿನ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳನ್ನು ಓಪನ್ ಮಾಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಸುಮಾರು ಶೇ. 1 ರಷ್ಟಿದೆ. ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ನಮ್ಮ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾದರೆ ಶಾಲೆಗಳನ್ನು ಬಂದ್ ಮಾಡಲಾಗುವುದು. ಸಿಎಂ ಜೊತೆಗೆ ಚರ್ಚೆ ನಡೆಸಿ ಶಾಲೆ ಬಂದ್ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.