Publish Date: Sun, 29 Aug 2021 (19:11 IST)
Updated Date: Sun, 29 Aug 2021 (19:12 IST)
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1262 ಕೊರೊನಾ ಸೋಂ
ಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,47,255ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 37,278ಕ್ಕೆ ಜಿಗಿತ ಕಂಡಿದೆ.
ರಾಜ್ಯದಲ್ಲಿ ಒಂದೇ ದಿನ 1384 ಸೋಂಕಿತರು ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,91,193ಕ್ಕೆ ಜಿಗಿತ ಕಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 18,758ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಒಂದೇ ದಿನ 334 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನದಲ್ಲಿ 361 ಮಂದಿ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7343ಕ್ಕೆ ಇಳಿಕೆಯಾಗಿದೆ.