Publish Date: Fri, 24 Apr 2020 (13:23 IST)
Updated Date: Fri, 24 Apr 2020 (13:24 IST)
ಕೋವಿಡ್ – 19 ನಿಯಂತ್ರಣಕ್ಕೆ ಮುಂದಾಗ ಕೊರೊನಾ ವಾರಿಯರ್ಸ್ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದವರಲ್ಲಿ ಐವರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ.
ಪೊಲೀಸರು ಬಂಧಿಸುವ ವೇಳೆ ಇಬ್ಬರಲ್ಲಿ ವೈರಸ್ ದೃಢಪಟ್ಟಿತ್ತು. ಇದೀಗ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ ಮೇಲೆ ಮೂವರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಉಪಮುಖ್ಯಮಂತ್ರಿ, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡೇ ಪಾದರಾಯನಪುರ ಗಲಭೆಯ ಆರೋಪಿಗಳನ್ನು ರಾಮನಗರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಸೋಂಕಿತರನ್ನು ಆಸ್ಪತ್ರೆಗೆ ಹಾಗೂ ಉಳಿದವರನ್ನು ಹಜ್ ಭವನಕ್ಕೆ ಶಿಫ್ಟ್ ಮಾಡಲಾಗುತ್ತಿದೆ ಎಂದಿದ್ದಾರೆ.