ಕರ್ನಾಟಕದ ಹೃದಯಭಾಗವಾಗಿರೋ ಹಾವೇರಿಯಲ್ಲಿಯೂ ಕೊರೊನಾ ವೈರಸ್ ಭೀತಿ ಮನೆ ಮಾಡಿದೆ.
ಹಾವೇರಿ ಜಿಲ್ಲೆಯಲ್ಲಿ ಕರೋನಾ (ಕೋವಿಡ್-19) ಸೋಂಕಿನ ಲಕ್ಷಣಗಳು ಕಂಡ ಬಂದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬರ ರಕ್ತದ ಮಾದರಿ ಹಾಗೂ ಗಂಡಲಿನ ದ್ರವವನ್ನು ಶಿವಮೊಗ್ಗ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ವಾಜಪೇಯಿ ತಿಳಿಸಿದ್ದಾರೆ.
ಈವರೆಗೆ ಜಿಲ್ಲೆಯಲ್ಲಿ 153 ಜನರ ಮೇಲೆ ನಿಗಾ ವಹಿಸಲಾಗಿದೆ. ಪರೀಕ್ಷೆಗೆ ಇಲ್ಲಿಯವರೆಗೆ 5 ಮಾದರಿಗಳನ್ನು ಕಳುಹಿಸಲಾಗಿದ್ದು, 4 ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಯಾವುದೇ ಕರೋನಾ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.