Publish Date: Sat, 14 Mar 2020 (14:40 IST)
Updated Date: Sat, 14 Mar 2020 (14:42 IST)
ಮಾರಣಾಂತಿಕ ಕೊರೊನಾ ವೈರಸ್ ಗೆ ಏರ್ ಪೋರ್ಟ್ ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಆರೋಗ್ಯ ಇಲಾಖೆಯ ರಾಜ್ಯ ತಂಡ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ತಂಡವು ಜಂಟಿ ಕಾರ್ಯಾಚರಣೆ ನಡೆಸುತ್ತಿದೆ.
ಯು.ಎಸ್.ಎ ಮತ್ತು ಜರ್ಮನ್ ಸೇರಿದಂತೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಕೊರೊನಾ ವೈರಸ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುತ್ತಿದೆ. ಕೊರೊನಾ ವೈರಸ್ ಸೋಂಕಿತ ಲಕ್ಷಣಗಳು ಕಂಡು ಬರುವವರನ್ನು ಪ್ರತ್ಯೇಕವಾಗಿರಿಸುವ ಉದ್ದೇಶದಿಂದ
ಪರಿಶೀಲಿಸಲಾಗುತ್ತಿದೆ.