ದಾವಣಗೆರೆಯಲ್ಲಿ ಸಂಚಾರಿ ಪೊಲೀಸ್ ಪೇದೆ ಸೇರಿ ಮೂವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ರೋಗಿ ಸಂಖ್ಯೆ 852 ರ ಸಂಪರ್ಕದಿಂದ ಒಬ್ಬರಿಗೆ ಮತ್ತು ಕಂಟೈನ್ ಮೆಂಟ್ ಪ್ರದೇಶದಲ್ಲಿ ಕರ್ತವ್ಯ ಸಲ್ಲಿಸಿದ್ದ 34 ವರ್ಷದ ಪೊಲೀಸ್ ಪೇದೆಗೆ ಸೋಂಕು ತಗುಲಿದೆ.
ಪೇದೆಗೆ ಸೋಂಕು ತಗುಲಿರುವುದನ್ನು ದೃಢಪಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಕೋವಿಡ್ -19 ಸೋಂಕು ದೃಢಪಟ್ಟಿರುವ ಪೊಲೀಸ್ ಪೇದೆಯ ಸಂಪರ್ಕದಲ್ಲಿದ್ದ ಎಲ್ಲರನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
32 ವರ್ಷದ ಮತ್ತೊಬ್ಬ ಯುವಕ ಐಎಲ್ ಐ ನಿಂದ ಬಳಲುತ್ತಿದ್ದು, ಈತನಲ್ಲೂ ಸೋಂಕು ಇರುವುದು ದೃಢಪಟ್ಟಿದೆ.