ಮಂಗಳೂರು: ನಿಗಮ, ಮಂಡಳಿ ನೇಮಕಾತಿ ಆದೇಶವನ್ನು ಮುಂದಿನ ಎರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನಿಗಮ, ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿ ಪ್ರಕಟಿಸುವುದು ವಿಳಂಬವಾಗಿದೆ. ಈಗಾಗಲೆ ಆಯ್ಕೆ ಪಟ್ಟಿ ಅಂತಿಮವಾಗುತ್ತಿದೆ. ಸಂಬಂಧಿಸಿ ಹೈಕಮಾಂಡ್ ಒಪ್ಪಿಗೆಯನ್ನೂ ಪಡೆಯಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಪಟ್ಟಿ ಅಂತಿಮಗೊಳಿಸಿ ಪ್ರಕಟಿಸಲಾಗುವುದು ಎಂದರು.
ಸರಕಾರ ಕಳೆದ ವರ್ಷವೂ ಟಿಪ್ಪು ಜಯಂತಿ ಆಚರಿಸಿದ್ದು, ಈ ವರ್ಷವೂ ಅದು ಮುಂದುವರಿಯಲಿದೆ. ಅದರಲ್ಲಿ ಯಾವುದೇ ಸಂಶಯ ಹಾಗೂ ಗೊಂದಲ ಬೇಡ. ಆರ್.ಎಸ್.ಎಸ್. ನಂತಹ ಕೋಮುವಾದಿ ಸಂಘಟನೆಗಳು ಈ ವಿಷಯದಲ್ಲಿ ಉದ್ದೇಶಪೂರ್ವಕವಾಗಿ ಗದ್ದಲ ಸೃಷ್ಟಿಸುತ್ತಿದ್ದಾರೆ. ಟಿಪ್ಪು ಆಚರಣೆ ವಿರೋಧಿಸುವ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ