Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವೆಂಟಿಲೇಟರ್ ಖರೀದಿಯಲ್ಲಿ ಭ್ರಷ್ಟಾಚಾರ : ಡಿ.ಕೆ.ಶಿವಕುಮಾರ್ ಆರೋಪ

ವೆಂಟಿಲೇಟರ್ ಖರೀದಿಯಲ್ಲಿ ಭ್ರಷ್ಟಾಚಾರ : ಡಿ.ಕೆ.ಶಿವಕುಮಾರ್ ಆರೋಪ
ಬೆಂಗಳೂರು , ಶನಿವಾರ, 18 ಜುಲೈ 2020 (15:49 IST)
ರಾಜ್ಯ ಸರಕಾರ ಕೊರೊನಾ ವೈರಸ್ ನಿಯಂತ್ರಣಕ್ಕೆ ಖರೀದಿಸಿದ ಉಪಕರಣಗಳಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮತ್ತೆ ದೂರಿದ್ದಾರೆ.

ಸರಣಿ ಟ್ವಿಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವೆಂಟಿಲೇಟರ್ ಖರೀದಿಯಲ್ಲಿ ಬಿಜೆಪಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರ ಜಗಜ್ಜಾಹಿರಾಗಿದೆ.

ತಮಿಳುನಾಡು ಸರಕಾರ ತಲಾ 4.78 ಲಕ್ಷ ರೂ.ಗೆ ಖರೀದಿಸಿದ ವೆಂಟಿಲೇಟರ್  ಗೆ ಕರ್ನಾಟಕ ಸರಕಾರ 18.20 ಲಕ್ಷ ರೂಪಾಯಿ ಕೊಟ್ಟಿದೆ.

ಈ CORONA CORRUPTION ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಉತ್ತರ ಕೊಡಬೇಕಿದೆ ಎಂದು ಡಿಕೆಶಿ ಆಗ್ರಹಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಮಸಾಜ್ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ