ವಿಧಾನ ಪರಿಷತ್ ನ ಉಪ ಚುನಾವಣೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದಿದ್ದರೆ ಒಳ್ಳೆಯದರು. ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಡಿಸಿಎಂ ಭರವಸೆ ವ್ಯಕ್ತಪಡಿಸಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಗೆಲ್ಲುವಷ್ಟು ಸಂಖ್ಯಾ ಬಲ ಬಿಜೆಪಿಗೆ ಇಲ್ಲ. ಆದರೂ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲು ಮುಂದಾಗುತ್ತಿದೆ. ಇದರ ಉದ್ದೇಶ ಅರ್ಥವಾಗುತ್ತಿಲ್ಲ ಎಂದರು.
ವಿಧಾನ ಪರಿಷತ್ ನ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ನಿಲ್ಲಿಸುವುದಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ. ಅದು ಒಳ್ಳೆಯದೇ ಎಂದು ಹೇಳಿದರು.
ಕಾಂಗ್ರೆಸ್ ನ ಇಬ್ಬರು ಅಭ್ಯರ್ಥಿಗಳು ಜಯ ಗಳಿಸುವುದು ನಿಶ್ಚಿತ, ಜೆಡಿಎಸ್ ಜತೆ ಚುನಾವಣೆ ಸಲುವಾಗಿ ಮಾತುಕತೆಗಳು ನಡೆದಿವೆ ಎಂದು ಹೇಳಿದರು.