Publish Date: Sat, 18 Jun 2022 (20:21 IST)
Updated Date: Sat, 18 Jun 2022 (20:23 IST)
2021-22 ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳ ಆಯ್ಕೆಗೆ ಮೆರಿಟ್ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈಗಾಗಲೇ ಲಿಖಿತ ಪರೀಕ್ಷೆ ನಡೆಸಿ ಮೊದಲ ಹಂತದ ಕೌನ್ಸೆಲಿಂಗ್ ಮುಗಿಸಲಾಗಿದೆ. ಆದರೆ ಬಹುತೇಕ ಜಿಲ್ಲೆಗಳಲ್ಲಿ ಹುದ್ದೆ ಖಾಲಿ ಉಳಿದಿದ್ದು ಶೈಕ್ಷಣಿಕ ವರ್ಷವು ಆರಂಭವಾಗಿರುವ ಹಿನ್ನೆಲೆಯಲ್ಲಿ ಉಳಿದ ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದೆ. ಆದ್ದರಿಂದ ಜೂ.24 ರಂದು ಕೌನ್ಸೆಲಿಂಗ್ ನಡೆಯಲಿದೆ. ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.