ಕೇಂದ್ರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ ಅಡಳಿತಕ್ಕೆ ಬಂದ ನಂತರ ದೇಶದ ಆರ್ಥಿಕತೆ ಸರ್ವನಾಶವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ದೇಶದ ಆರ್ಥವ್ಯವಸ್ಥೆ ಸಧೃಡವಾಗಿತ್ತು. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯವರು ಗಾಂಧಿ ತತ್ವ ಸಿದ್ಧಾಂತಗಳ ವಿರುದ್ಧ ಹೋಗುತ್ತಿದ್ದಾರೆ. ಬಿಜೆಪಿ ನಾಯಕರು ಮನಸುಗಳು ಮೊದಲು ಸ್ವಚ್ಚವಾಗಬೇಕು. ಎಲ್ಲಿಯವರೆಗೆ ಬಿಜೆಪಿಯವರ ಮನಸುಗಳು ಸ್ವಚ್ಚವಾಗುವುದಿಲ್ಲವೋ ಅಲ್ಲಿಯವರೆಗೆ ದೇಶದಲ್ಲಿ ಶಾಂತಿ ನೆಲಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷ ದೇಶಕ್ಕೆ ಹಲವಾರು ನಾಯಕರನ್ನು ಕೊಡುಗೆಯಾಗಿ ನೀಡಿದೆ ಎನ್ನುವುದನ್ನು ಬಿಜೆಪಿ ನಾಯಕರು ಮರೆಯಬಾರದು. ಕಾಂಗ್ರೆಸ್ ಮುಕ್ತ ಭಾರತ ಎನ್ನುವ ಘೋಷಣೆ ಹಿಟ್ಲರ್ ಸಂಸ್ಕ್ರತಿಯನ್ನು ತೋರಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.