Publish Date: Thu, 05 Dec 2019 (21:26 IST)
Updated Date: Thu, 05 Dec 2019 (21:27 IST)
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಧಾರವಾಡದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಧಾರವಾಡದ ಕುಂದಗೋಳ ತಾಲೂಕಿನ ಗುಡಗೇರಿ ಗ್ರಾಮದಲ್ಲಿ 69 ವರ್ಷದ ಮೋಹನ ಮಾಕನ್ನವರ ಎಂಬಾತ 2018 ರ ಡಿ. 29 ರಂದು ಗ್ರಾಮದ 5 ವರ್ಷದ ಬಾಲಕಿಯನ್ನು ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದ.
ಈ ಕುರಿತು ಗುಡಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ಮಾಡಿದ್ದ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ಮಾಡಿದ ಧಾರವಾಡದ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ಎಂ. ಗಂಗಾಧರ ಅವರು, ಆರೋಪಿ ವಿರುದ್ಧದ ಆರೋಪಗಳು ಸಾಬೀತು ಆದ ಹಿನ್ನೆಲೆಯಲ್ಲಿ ಅಪರಾಧಿ ಮೋಹನಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದರು.
ಅಲ್ಲದೇ ದಂಡದ ಮೊತ್ತವನ್ನು ಸಂತ್ರಸ್ತ ಬಾಲಕಿ ಕುಟುಂಬಕ್ಕೆ ನೀಡುವಂತೆ ಆದೇಶ ಹೊರಡಿಸಿದರು.