ಮೈಸೂರು: ಮರಳು ಸಾಗಾಣಿಕೆಗೆ ಅಕ್ರಮ ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಅಕ್ರಮ ಮರಳುಗಾರಿಕೆಗೆ ಪರವಾನಗಿ ನೀಡಲು ಲಂಚ ಪಡೆಯುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗೆ ಪ್ರೇರೇಪಣೆ ನೀಡಿದ ಪ್ರಕರಣದಲ್ಲಿ ಸಾಕಷ್ಟು ಸಾಕ್ಷ್ಯಾಧಾರಗಳು ದೊರೆತಿವೆ. ಈ ಹಿನ್ನೆಲೆಯಲ್ಲಿ ಸುನೀಲ್ ಬೋಸ್ ಆರೋಪಿ ಎಂದು ಪರಿಗಣಿಸಿ ಮೈಸೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
ರಾಜು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿದ್ದಾರೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅಲ್ಫೋನ್ಸಿಸ್ ಗೆ ಮರಳು ಗುತ್ತಿಗೆದಾರನಿಂದ ಲಂಚ ಪಡೆಯುವಂತೆ ಸುನೀಲ್ ಬೋಸ್ ಒತ್ತಡ ಒತ್ತಡ ಹಾಕಿದ್ದರು. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ಸಂದರ್ಭದಲ್ಲಿ ತಪ್ಪೊಪ್ಪಿಕೊಂಡು ಸುನಿಲ್ ಬೋಸ್ ವಿರುದ್ಧ ಅಲ್ಫೋನ್ಸಿಸ್ ಲಿಖಿತ ದೂರು ದಾಖಲಿಸಿದ್ದರು. ಈ ಸಂಬಂಧ ಸುನೀಲ್ ಬೋಸ್ ಕೋರ್ಟ್ ಗೆ ಹಾಜರಾಗಿ ವಿಚಾರಣೆ ಎದುರಿಸುವಂತೆ ಕೋರ್ಟ್ ಆದೇಶಿಸಿದೆ.