ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವು ಟಫ್ ರೂಲ್ಸ್ ಗಳನ್ನು ಜಾರಿಗೊಳಿಸಿದೆ.
ಮಾಲ್ ಗೆ ಎಂಟ್ರಿ ಕೊಡುವವರಿಗೆ ಎರಡು ಡೋಸ್ ಸರ್ಟಿಫಿಕೇಟ್ ಕಡ್ಡಾಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಮಾಲ್ ಗಳಲ್ಲಿ ಈಗಾಗಲೇ ಪರಿಶೀಲನೆ ಪ್ರಾರಂಭವಾಗಿದೆ.ಮಾಲ್ ಗಳಿಗೆ ತೆರಳುವವರಿಗಾಗಿ ಅಧಿಕಾರಿಗಳು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್ ನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ. ವೀಕೆಂಡ್ ನಲ್ಲಿ ಮಾಲ್ ಗೆ ಬರುವವರ ಸಂಖ್ಯೆ ಹೆಚ್ಚಾಗಿರುವುದರಿಂದ ಮಾಲ್ ಗಳ ಮುಂಭಾಗ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
2 ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್ ಗೆ ಪ್ರವೇಶ ಎಂದು ಮಾಲ್ ಮುಂದೆ ಸಿಬ್ಬಂದಿ ನೊಟೀಸ್ ಅಂಟಿಸಿದ್ದಾರೆ. ಹೀಗಾಗಿ ಪ್ರತಿಯೊಬ್ಬರ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಪರಿಶೀಲನೆ ನಡೆಸುತ್ತಿದ್ದಾರೆ. ಸರ್ಟಿಫಿಕೇಟ್ ಇಲ್ಲದವರನ್ನು ಸಿಬ್ಬಂದಿ ವಾಪಾಸ್ ಕಳುಹಿಸುತ್ತಿದ್ದಾರೆ.