Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಮುದಾಯಕ್ಕೆ ಹರಡಿದ ಕೊವಿಡ್​​​ ಸೋಂಕು!

ಸಮುದಾಯಕ್ಕೆ ಹರಡಿದ ಕೊವಿಡ್​​​ ಸೋಂಕು!
bangalore , ಶುಕ್ರವಾರ, 22 ಡಿಸೆಂಬರ್ 2023 (14:40 IST)
ದೇಶದಲ್ಲಿ ಕೊವಿಡ್ ವೈರಸ್‌ನ ರೂಪಾಂತರಿ ತಳಿ JN.1 ದಿನೇದಿನೇ ಹೆಚ್ಚುತ್ತಿದ್ದು, ಈಗಾಗಲೇ ಇದು ಸಮುದಾಯಕ್ಕೆ ಹರಡಿರುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ಭಾರತೀಯ ರಾಷ್ಟ್ರೀಯ ವೈದ್ಯಕೀಯ ಸಂಘದ ಕೊವಿಡ್ ಟಾಸ್ಕ್‌ಫೋರ್ಸ್​​​​ ಉಪಾಧ್ಯಕ್ಷ ಡಾ.ರಾಜೀವ್ ಜಯದೇವನ್ ಹಾಗೂ ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಈ ಕುರಿತು ಎಚ್ಚರಿಕೆ ನೀಡಿದ್ದಾರೆ.

ಡಾ.ಜಯದೇವನ್ ಮತನಾಡಿ, ಕೇರಳದ ಕೊಚ್ಚಿಯಲ್ಲಿ ಇನ್ ಫ್ಲುಯೆಂಜಾ ಲಕ್ಷಣಗಳಿರುವವರನ್ನು ಪರೀಕ್ಷೆಗೊಳಪಡಿಸಿದಾಗ ಶೇ.30ರಷ್ಟು ಮಂದಿಗೆ ಪಾಸಿಟಿವ್ ಬಂದಿದೆ. ಇದು ಮತ್ತೊಮ್ಮೆ ಕೊವಿಡ್ ಜನಸಮುದಾಯಕ್ಕೆ ಹರಡಿರುವುದರ ಲಕ್ಷಣ. ನನ್ನ ಪಕ್ಕದ ಮನೆಯವರಿಗೂ ಕೊವಿಡ್ ಬಂದಿದೆ. ಎಲ್ಲೆಡೆ ಪಾಸಿಟಿವ್ ಬರುತ್ತಿದೆ. ಕಳೆದೊಂದು ತಿಂಗಳಿನಿಂದ ಈ ವೈರಸ್ ಹರಡುತ್ತಿದೆ. ಆದರೆ ಕೊವಿಡ್ ಪರೀಕೆ ಬಹಳ ಕಡಿಮೆ ನಡೆಯುತ್ತಿತ್ತು.

ಕೆಲವೆಡೆ ಪರೀಕ್ಷೆಯೇ ನಡೆಯುತ್ತಿರಲಿಲ್ಲ. ನವೆಂಬರ್‌ಗಿಂತ ಮೊದಲು ಇನ್‌ಪುಯೆಂಜಾ ಲಕ್ಷಣವಿರುವವರಲ್ಲಿ ಶೇ.1 ರಷ್ಟು ಮಂದಿಗೆ ಪಾಸಿಟಿವ್ ಬರುತ್ತಿತ್ತು. ನವೆಂಬರ್ ನಂತರ ಅದು ಶೇ.9ಕ್ಕೆ ಏರಿತು. ಈಗ ಪಾಸಿಟಿವಿಟಿ ದರ ಕೆಲವೆಡೆ ಶೇ.30ಕ್ಕೆ ಏರಿಕೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಷ್ಟವಿಲ್ಲದ ವ್ಯಕ್ತಿಯೊಂದಿಗೆ ವಿವಾಹ: ಪತಿಗೆ ಮಹಿಳೆ ಮಾಡಿದ್ದು ಕೇಳಿದ್ರೆ ಬೆಚ್ಚಿ ಬೀಳ್ತಿರಿ