ವಿಶ್ವಪ್ರಸಿದ್ಧ ಪ್ರವಾಸಿ ತಾಣ, ಪ್ರೇಮಿಗಳ ಸ್ವರ್ಗ ತಾಜ್‌ಮಹಲ್‌ಗೆ ಭೇಟಿ ನೀಡಬಯಸುವ ಪ್ರವಾಸಿಗರಿಗೂ ಕೊವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಹೀಗೆಂದು ಆಗ್ರಾದ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಆಗ್ರಾದ ತಾಜ್‌ಮಹಲ್ ವೀಕ್ಷಿಸಲು ದೇಶ, ವಿದೇಶ ಪ್ರವಾಸಿಗರು ಪ್ರತಿದಿನ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹಾಗಾಗಿ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭೇಟಿಗೂ ಮುನ್ನ ಕೊವಿಡ್ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದ್ದಾರೆ. ಅಲ್ಲದೇ ಸೋಂಕು ಹರಡುವುದನ್ನು ತಡೆಯಲು ಆರೋಗ್ಯ ಇಲಾಖೆ ಈಗಾಗಲೇ ಪರೀಕ್ಷೆಗಳನ್ನು ಪ್ರಾರಂಭಿಸಿದೆ. ಹೈ ಅಲರ್ಟ್ ಘೋಷಣೆ ಮಾಡಿರುವುದರಿಂದ ಎಲ್ಲ ಸಂದರ್ಶಕರಿಗೂ ಕೊವಿಡ್ ಟೆಸ್ಟಿಂಗ್ ಕಡ್ಡಾಯಗೊಳಿಸಲಾಗಿದೆ ಎಂದು ಆಗ್ರಾ ಜಿಲ್ಲಾ ಆರೋಗ್ಯಾಧಿಕಾರಿ ಅನಿಲ್ ಸತ್ಸಂಗಿ ತಿಳಿದಿದ್ದಾರೆ.