Webdunia - Bharat's app for daily news and videos

Install App

ಮೈಸೂರು ಒಡೆಯರ್‌ ಯದುವೀರ್ -ತ್ರಿಷಿಕಾ ದಂಪತಿಯ ಎರಡನೇ ಪುತ್ರನಿಗೆ ತೊಟ್ಟಿಲು ಶಾಸ್ತ್ರ

Sampriya
ಬುಧವಾರ, 11 ಡಿಸೆಂಬರ್ 2024 (14:15 IST)
Photo Courtesy X
ಮೈಸೂರು:  ಮೈಸೂರು ರಾಜವಂಶಸ್ಥರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ತ್ರಿಷಿಕಾ ದಂಪತಿಗೆ ಎರಡನೇ ಗಂಡು 2017ರ ಡಿಸೆಂಬರ್ 6 ರಂದು ಜನಿಸಿತ್ತು. ಇದೀಗ ಪುತ್ರನಿಗೆ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ‌ ದೇವಸ್ಥಾನದಲ್ಲಿ ತೊಟ್ಟಿಲು ಶಾಸ್ತ್ರ ನೆರವೇರಿಸಲಾಗಿದೆ.

ಮೈಸೂರು- ಕೊಡಗು ಸಂಸದರೂ ಆಗಿರುವ ಯದುವೀರ್  ಒಡೆಯರ್, ತ್ರಿಷಿಕಾ ದೇವಿ ದಂಪತಿಯ ಕಿರಿಯ ಪುತ್ರನಿಗೆ ತೊಟ್ಟಿಲುಶಾಸ್ತ್ರವು ಆಪ್ತರ ಮಧ್ಯೆ ಸಂಭ್ರಮ ನೆರವೇರಸಲಾಗಿದೆ. ಇದಕ್ಕೂ ಮೊದಲು ರಾಜವಂಶಸ್ಥರು ಚಾಮುಂಡಿದೇವಿಗೆ ವಿಶೇಷ ಪೂಜೆ ನೆರವೇರಿಸಿದರು.

ದೇವಿಗೆ ಪೂಜೆ ಕಾರ್ಯಗಳೆಲ್ಲ ಮುಗಿದ ಮೇಲೆ ಚಾಮುಂಡಿಬೆಟ್ಟದಲ್ಲಿ ದೇವಾಲಯದ ಬಳಿ ಇರುವ ಸಂಪಿಗೆ ಮರಕ್ಕೆ ತೊಟ್ಟಿಲು ಕಟ್ಟಿ ಪೂಜೆ ಮಾಡಲಾಯಿತು. ಇದಾದ ಮೇಲೆ ತೊಟ್ಟಿಲು ಶಾಸ್ತ್ರ ಮಾಡಲಾಯಿತು. ಈ ವೇಳೆ ರಾಜಮಾತೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು.

ವಿಶ್ವವಿಖ್ಯಾತ ದಸರಾ ಸಂದರ್ಭದಲ್ಲೇ ಯದುವೀರ್‌- ತ್ರಿಷಿಕಾ ದಂಪತಿಯು ಎರಡನೇ ಮಗುವನ್ನು ಬರಮಾಡಿಕೊಂಡಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಎರಡನೇ ಮಗುವಿಗೆ ಜನ್ಮ ನೀಡಿದ್ದರು.

ಯುವರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ತ್ರಿಷಿಕಾ ಕುಮಾರಿ ಅವರನ್ನು 2016ರಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಬಳಿಕ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಕುಮಾರಿ ಅವರು ತಮ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದರು. ಆ ಮಗುವಿಗೆ ಆದ್ಯವೀರ್‌ ಎಂದು ನಾಮಕರಣ ಮಾಡಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ