ಬೆಂಗಳೂರು : ಏರೋಸ್ಪೇಸ್ ಅಭಿವೃದ್ಧಿಯ ಶ್ರೇಯಸ್ಸು ಕರ್ನಾಟಕಕ್ಕೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಭಾನುವಾರ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ಪಾಲ್ಗೊಂಡು ಮಾತನಾಡಿದ ಅವರು,
ರಾಜ್ಯದ ಏರೋಸ್ಪೇಸ್ ನೀತಿ ಹಾಗೂ ರಕ್ಷಣಾ ಪಾರ್ಕ್ನ ಮೊದಲ ಹಂತ ಪೂರ್ಣಗೊಂಡಿದೆ. 2ನೇ ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ ನಡೆಸಲು ಅತ್ಯಂತ ಸೂಕ್ತ ಸ್ಥಳ.
ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ.