ಹಾಸನ : ಶ್ರವಣಬೆಳಗೊಳದ ಖ್ಯಾತ ಜೈನ ಮುನಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (ಅವರ ಅಂತ್ಯಕ್ರಿಯೆ ಚಿಕ್ಕಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದ ಅನುಸಾರ ಕಿರಿಯ ಸ್ವಾಮೀಜಿ ಸಮ್ಮುಖದಲ್ಲಿ ನಡೆಯಿತು.
ಜೈನ ಮುನಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಗುರುವಾರ ನಸುಕಿನ ಜಾವ ಜೀನೈಕ್ಯರಾಗಿದ್ದಾರೆ. ಸ್ವಾಮೀಜಿ ಗುರುವಾರ ಬೆಳಗ್ಗೆ ನಿತ್ಯಕರ್ಮಗಳಿಗೆ ಎದ್ದಂತಹ ಸಮಯದಲ್ಲಿ ಕಾಲುಜಾರಿ ಕೆಳಗೆ ಬಿದ್ದು, ತಲೆಗೆ ಗಂಭೀರ ಸ್ವರೂಪದ ಪೆಟ್ಟು ಮಾಡಿಕೊಂಡಿದ್ದರು. ಕೂಡಲೇ ಸ್ವಾಮೀಜಿಯನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ.
73 ವರ್ಷದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜೀನೈಕ್ಯರಾಗಿರುವುದಾದಕ್ಕೆ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ, ಆದಿಚುಂಚನಗಿರಿ ಸ್ವಾಮೀಜಿ, ಸುತ್ತೂರು ಶ್ರೀಗಳು ಸೇರಿ ಅನೇಕರು ಕಂಬನಿ ಮಿಡಿದಿದ್ದಾರೆ.
ಶ್ರೀಮಠದ ಆವರಣದಲ್ಲಿ ಸ್ವಾಮೀಜಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಭಕ್ತರು ಅಂತಿಮ ನಮನ ಸಲ್ಲಿಸಿದರು. ಶ್ರೀಗಳ ಗೌರವಾರ್ಥ ಶ್ರವಣಬೆಳಗೊಳದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂಪ್ರೇರಿತವಾಗಿ ಬಂದ್ ಆಚರಿಸಲಾಯಾಯಿತು.