ಬೆಂಗಳೂರು- ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಪರಿಸರಕ್ಕೆ ತೀವ್ರ ಹಾನಿ ಮಾಡುತ್ತಿರುವ ಘಟಕಗಳನ್ನು ಪತ್ತೆ ಮಾಡಿ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅದರಲ್ಲೂ ಪರಿಸರಕ್ಕೆ ಹಾನಿಯಾಗಲಿದೆ ಹೀಗಾಗಿ ಕೈಗಾರಿಕೆ ಮುಚ್ಚುವಂತೆ ಆದೇಶಿಸಿದ್ದರೂ, ಅದಕ್ಕೆ ಬೆಲೆ ಕೊಡದೆ ಕೈಗಾರಿಕೆ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಬೆಂಗಳೂರಿನ ಬೆಳ್ಳಂದೂರು, ವರ್ತೂರು ಕೆರೆಗಳಿಗೆ ಕಲುಷಿತ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೆರೆ ಭಾಗದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಅಳವಡಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಗಡುವು ನೀಡಿತ್ತು. ಆ ಗಡುವು ಈ ವರ್ಷದ ಡಿಸೆಂಬರ್‌ಗೆ ಅಂತ್ಯವಾಗಲಿದೆ.