Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಎಂಬ ಪದ ಅಶ್ಲೀಲ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಮತ್ತೆ ಅನಾವರಣಗೊಳಿಸಿದ್ದಾರೆ.
ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಧ್ಯಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ರೀತಿಯಾಗಿ ಹಿಂದೂಗಳನ್ನು ಟೀಕಿಸುವ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಬೆಳೆಸಿಕೊಂಡು ಬಂದಿದೆ. ಹಿಂದೂಗಳನ್ನು ಅವಮಾನಿಸುವುದು, ಕಡೆಗಣಿಸುವುದನ್ನು ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಸೂಚಿಯಾಗಿ ಪಾಲಿಸುತ್ತಲೇ ಬಂದಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.