Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜಮೀನಿನ ಬೆಳೆಗಳ ಮೇಲೆ ಕಾಡಾನೆಗಳು ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಹಾಲಿಂಗನಕಟ್ಟೆ ಹೂರವಲಯದಲ್ಲಿ ನಡೆದಿದೆ. ತಡರಾತ್ರಿ ಏಕಾಏಕಿ ಜಮೀನುಗಳ ಬೆಳೆ ಮೇಲೆ ಎರಗಿದ ಕಾಡಾನೆಗಳು ಅಪಾರ ಪ್ರಮಾಣದ ಬೆಳೆಗಳನ್ನ ನಾಶ ಮಾಡಿವೆ. ಮಾದಪ್ಪ ಎಂಬುವವರಿಗೆ ಸೇರಿದ ಜಮೀನಾಗಿದ್ದು ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರೆದಿದೆ. ಕೈಗೆ ಬರಬೇಕಿದ್ದ ಬೆಳೆಗಳು ಆನೆಗಳ ತುಳಿತಕ್ಕೆ ನಾಶವಾಗಿದೆ. ಅರಣ್ಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಷ್ಟಕ್ಕೆ ಒಳಗಾಗಿರುವ ರೈತರ ನೆರವಿಗೆ ಧಾವಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.