ಬೆಂಗಳೂರು : ಸಿಆರ್.ಪಿ.ಎಫ್. ಯೋಧರಿದ್ದ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ ಪರಿಣಾಮ 44 ಯೋಧರು ಸಾವನಪ್ಪಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಯೋಧರು ಹುತಾತ್ಮರಾಗಿರುವುದು ನಿಜಕ್ಕೂ ದುರ್ದೈವದ ಸಂಗತಿ. ನಮ್ಮ 39 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಕೇಂದ್ರ ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಹೇಳಿದ್ದಾರೆ.
ಹಾಗೇ ಪಾಕ್ ಬೆಂಬಲಿತ ಉಗ್ರರಿಂದ ಈ ಕೃತ್ಯ ನಡೆದಿದೆ. ಕಳೆದ ಹಲವು ವರ್ಷಗಳಿಂದ ಪರಿಸ್ಥಿತಿ ಕೆಡುತ್ತಿದೆ. ಈ ಘಟನೆಯಿಂದ ನಮಗೆ ಬಹಳ ನೋವಾಗಿದೆ ಎಂದು ಅವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.