ಕೋವಿಡ್ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಆಕ್ಟೋಬರ್.06 ರಿಂದ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕಫ್ರ್ಯೂ ಜಾರಿ ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಲ್ಲಿ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು,ಇತರ ಕೂಟಗಳು ಮತ್ತು ಬೃಹತ್ ಸಭೆಗಳು ಸೇರಿದಂತೆ ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಮತ್ತು ಸಭೆಗಳನ್ನು ನಿಷೇಧಿಸಲಾಗಿದೆ ಎಂದು ಅವರು ತಾವು ಹೊರಡಿಸಿದ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
ಈ ಎಲ್ಲಾ ನಿರ್ಬಂಧಗಳು ಮುಂದಿನ ಸರ್ಕಾರದ ಆದೇಶದವರೆಗೆ ಜಾರಿಯಲ್ಲಿರುತ್ತವೆ. ಮಾರ್ಗಸೂಚಿ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60, ಐಪಿಸಿ ಸೆಕ್ಷನ್ 188 ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.