Publish Date: Mon, 16 Oct 2017 (10:05 IST)
Updated Date: Mon, 16 Oct 2017 (10:14 IST)
ಬೆಂಗಳೂರು: ಮಳೆಯ ಅವಾಂತರದ ಆಘಾತದಲ್ಲಿರುವ ಬೆಂಗಳೂರು ಜನರಿಗೆ ಇಂದು ಬೆಳ್ಳಂ ಬೆಳಿಗ್ಗೆ ಮತ್ತೊಂದು ಸಾವು ನೋವಿನ ಸುದ್ದಿ ಬಂದಿದೆ. ಈಜಿಪುರದಲ್ಲಿ ಸಿಲಿಂಡರ್ ಸ್ಪೋಟಗೊಂಡು ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ.
68 ವರ್ಷದ ಕಲಾವತಿ, 30 ವರ್ಷದ ರವಿಚಂದ್ರನ್ ಸೇರಿದಂತೆ ನಾಲ್ವರು ದುರ್ಮರಣಕ್ಕೀಡಾಗಿದ್ದಾರೆ. ಬೆಳಿಗ್ಗೆ ಸುಮಾರು 6 50 ರ ವೇಳೆಗೆ ಈ ಘಟನೆ ನಡೆದಿದೆ.
ಸಿಲಿಂಡರ್ ಸ್ಪೋಟದಿಂದಾಗಿ 2 ಮಹಡಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ ನಾಲ್ವರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿ, ಸ್ಥಳೀಯರು ನೆರವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ ಸಿಬ್ಬಂದಿಗೂ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ