Select Your Language

Notifications

webdunia
webdunia
webdunia
webdunia

ಸಿಲಿಂಡರ್ ಸ್ಫೋಟ; ತಾಯಿ ಮಗಳು ಸಜೀವ ದಹನ

ಬಳ್ಳಾರಿ
ಬಳ್ಳಾರಿ : ಸಿಲಿಂಡರ್ ಸ್ಫೋಟಗೊಂಡ ಹಿನ್ನಲೆಯಲ್ಲಿ ತಾಯಿ ಮಗಳು ಸಜೀವ ದಹನವಾದ ಘಟನೆ ಇಂದು ಬೆಳಿಗ್ಗೆ ಬಳ್ಳಾರಿ ತಾಲೂಕಿನ ಸಂಜೀವರಾಯನ ಕೋಟೆಯಲ್ಲಿ ನಡೆದಿದೆ.



ತಾಯಿ ಪಾರ್ವತಮ್ಮ , ಮಗಳು ಹುಲಿಗೆಮ್ಮ ಮೃತಪಟ್ಟವರು. ಇಂದು ಬೆಳಿಗ್ಗೆ ಮನೆಯಲ್ಲಿ ಅಡುಗೆ ಮಾಡುವ ವೇಳೆ ಅನಿಲ ಸೋರಿಕೆಯಾದ ಹಿನ್ನಲೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ಪರಿಣಾಮ ತಾಯಿ ಮಗಳು ಸಜೀವವಾಗಿ ಸುಟ್ಟು ಹೋಗಿದ್ದು, ಮನೆಯಲ್ಲಿರುವ ವಸ್ತುಗಳು ಸುಟ್ಟು ಕರಕಲಾಗಿದೆ.


ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ, ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೇಬಿ ಬೆಟ್ಟದ ಗಣಿಗಾರಿಕೆ ಬಗ್ಗೆ ಧ್ವನಿ ಎತ್ತಿದ ಸ್ವಾಮೀಜಿಗೆ ಬೆದರಿಕೆ ಒಡ್ಡಿದ ಗಣಿ ಕುಳಗಳು