ಸಿಲಿಂಡರ್​ ಸ್ಫೋಟ; ಗೋಡೆ ಕುಸಿತ

Webdunia
ಬುಧವಾರ, 11 ಜನವರಿ 2023 (20:12 IST)
ವಾಸದ ಮನೆಯ ಹೊರಗೆ ಮತ್ತು ಮನೆಯ ಒಳಗಿದ್ದ 2 ಗ್ಯಾಸ್ ಸಿಲಿಂಡರ್‌ಗಳು ಸ್ಪೋಟಗೊಂಡ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ, ನಾಗೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಮೂವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಧ್ಯ ರಾತ್ರಿ 2.45 ರ ಸುಮಾರಿಗೆ ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಸ್ಪೋಟಗೊಂಡಿದೆ. ಮನೆಯಿಂದ ಹೊರಗೋಡಿ ಬಂದು ಮೂವರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಪೋಟದ ತೀವ್ರತೆಗೆ ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಹಾನಿಯಾಗಿವೆ. ಶಬ್ದ ಕೇಳಿ ಸ್ಥಳೀಯರು ದೌಡಾಯಿಸಿದ್ದಾರೆ. ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಹಾಗೂ ಸ್ನೇಹಿತರು ಬಂದು ಬೆಂಕಿ ಅಕ್ಕಪಕ್ಕದ ಮನೆಗೆ ವ್ಯಾಪಿಸದಂತೆ ನೀರು, ಮರಳು ಎರಚಿ ಬೆಂಕಿ ನಂದಿಸಿದ್ದಾರೆ. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವ ಮುನ್ನವೇ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ರು. ಸ್ಪೋಟದ ರಭಸಕ್ಕೆ ಗೋಡೆ ಕುಸಿದಿದ್ದು, ಹೆಂಚುಗಳು ನೆಲಕ್ಕುರುಳಿವೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದರು. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

ರೀಲ್ಸ್ ಗಾಗಿ ಪುಟಾಣಿ ಮಗುವಿಗೆ ಸಿಗರೇಟ್, ಬಿಯರ್ ಕೊಟ್ಟ ಯುವಕ: Video

ಕೆಎಸ್ಆರ್ ಟಿಸಿ ನೌಕರರ ಬೆಂಗಳೂರು ಚಲೋ ತಡೆಯಲು ಸರ್ಕಾರ ಪ್ರಯತ್ನಿಸಿದರೂ ಲೆಕ್ಕಕ್ಕಿಲ್ಲ

ಮುಂದಿನ ಸುದ್ದಿ
Show comments