ರಾಜ್ಯದಲ್ಲಿ ಈಗಾಗಲೇ ಹಿಜಬ್ ಪ್ರಕರಣ ಸಂಬಂಧ ಪರ ವಿರೋಧ ಚರ್ಚೆಗಳು ನಡೆಯುತ್ತಿದೆ. ಹೀಗಿರುವಂತಹ ಸಂದರ್ಭದಲ್ಲಿ ಸದಾಶಿವ ನಗರದ ಗೃಹ ಕಛೇರಿಯಲ್ಲಿ ಮುಸ್ಲಿಂ ಮುಖಂಡರ ಜೊತೆ ಡಿಕೆ ಶಿವಕುಮಾರ್ ಸಭೆ ನಡೆಸಿ ಸಮಾಲೋಚನೆ ನಡೆಸಿದ್ದಾರೆ. ಹಿಜಬ್ ವಿವಾದದ ಸಂಬಂಧ ಮುಸ್ಲಿಂ ಮುಖಂಡರ ಸಲಹೆ, ಅಭಿಪ್ರಾಯಗಳನ್ನು ಪಡೆದ ಡಿಕೆ ಶಿವಕುಮಾರ್ ಸಾಕಷ್ಟು ಸಮಯ ಚರ್ಚೆ ನಡೆಸಿದರು.
ಇದೇ ಸಂದರ್ಭದಲ್ಲಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ. ಖಾದರ್, ಶಾಸಕರಾದ ಎನ್.ಎ. ಹ್ಯಾರೀಸ್, ಖನೀಜ್ ಫಾತಿಮಾ, ರಹೀಂ ಖಾನ್, ಎಂಎಲ್ಸಿ ನಜೀರ್ ಅಹಮದ್, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್, ಮಾಜಿ ಅಧ್ಯಕ್ಷ ಸಯ್ಯದ್ ಅಹಮದ್ ಮತ್ತಿತರರು ಭಾಗವಹಿಸಿದ್ದರು.