Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಮಹತ್ವದ ಸಭೆ ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ಗೆ ಬುಲಾವ್ ನೀಡಿವೆ.
ಬೆಂಗಳೂರಿನಿಂದ ದೆಹಲಿಗೆ ಡಿಕೆಶಿ ಪ್ರಯಾಣ ಬೆಳೆಸಿದ್ದಾರೆ. ಡಿ. ಕೆ. ಶಿವಕುಮಾರ್ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಜೊತೆ ಭಾನುವಾರ ಸಭೆ ನಡೆಸಲಿದ್ದಾರೆ. ಕೆಪಿಸಿಸಿ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಸೇರಿದಂತೆ ವಿವಿಧ ಹಂತದ ಪದಾಧಿಕಾರಿಗಳ ನೇಮಕಾತಿ ಹಲವು ದಿನದಿಂದ ಬಾಕಿ ಉಳಿದಿದೆ. ಜಿಲ್ಲಾ ಅಧ್ಯಕ್ಷರ ನೇಮಕದ ಕುರಿತು ಆಯಾ ಜಿಲ್ಲೆಗಳಿಂದ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ.