ಇಂಧನ ಖಾತೆ ಸಚಿವ ಹಿರಿಯ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಕುರಿತಂತೆ ಕಾಂಗ್ರೆಸ್ ಹೈಕಮಾಂಡ್ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ವರ್ಷದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗಾಗಿ ಇದಾಗಲೇ ಪೂರ್ವ ಸಿದ್ದತೆ ಆರಂಭಿಸಿರುವ ಕಾಂಗ್ರೆಸ್, ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಬಲ ಕೋಮಿನ ಮುಖಂಡನಿಗೆ ನೀಡಬೇಕು ಎನ್ನುವ ಇರಾದೆ ಹೊಂದಿದೆ.
ಕಾಂಗ್ರೆಸ್ ಪಕ್ಷ ಹೈಕಮಾಂಡ್ ಯಾವುದೇ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ಇಲ್ಲಿಯವರೆಗೆ ಪಕ್ಷದ ಹೈಕಮಾಂಡ್ ನೀಡಿದ ಎಲ್ಲಾ ಜವಾಬ್ದಾರಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇನೆ ಎಂದು ತಿಳಿಸಿದ್ದಾರೆ.
ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಚುನಾವಣೆ ಚಾಣಕ್ಯ ಪ್ರಶಾಂತ್ ಕಿಶೋರ್ ಅವರಿಗೆ ಈಗಾಗಲೇ ಗಾಳ ಹಾಕಿದ್ದು, ಡಿಕೆಶಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯದಲ್ಲಿ ಪಕ್ಷವನ್ನು ಬೇರುಮಟ್ಟದಿಂದ ಬಲಪಡಿಸಲು ಸೂಚನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.