ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿ ಕಾರ್ಯನಿರ್ವಹಿಸಲಿ. ಕಾಂಗ್ರೆಸ್ ಕಾರ್ಯಕರ್ತನಂತೆ ಕಾರ್ಯನಿರ್ವಹಿಸುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಾಗ್ದಾಳಿ ನಡೆಸಿದ್ದಾರೆ.
ಗೃಹ ಸಚಿವರಾಗಿದ್ದ ಜಿ.ಪರಮೇಶ್ವರ್‌ರನ್ನು ಸಚಿವ ಸ್ಥಾನದಿಂದ ಓಡಿಸಿದ್ದಾರೆ. ಗೃಹ ಖಾತೆ ಮುಖ್ಯಮಂತ್ರಿ ಬಳಿಯೇ ಇದ್ದರೂ ಇಲ್ಲಿಯವರೆಗೆ ಇಲಾಖೆಯ ಸಭೆ ನಡೆಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಚಿವರಾದ ರಮಾನಾಥ್ ರೈ ಮತ್ತು ಯು.ಟಿ.ಖಾದರ್ ಜನತೆಯನ್ನು ಪ್ರಚೋದಿಸಿ ಅಶಾಂತಿ ಉಂಟು ಮಾಡುವ ಕಾರ್ಯಮಾಡುತ್ತಿದ್ದಾರೆ. ಜನಪರ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹೇಯ ಕೃತ್ಯವಾಗಿದ್ದು, ಅವರ ಹತ್ಯೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.