ರಾಜ್ಯದಲ್ಲಿ ಬಹುತೇಕ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಪ್ರವಾಹ ಭೀತಿ ತಲೆದೋರಿದೆ.
ಕೇರಳದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ರಾಜ್ಯದ ಮೇಲೆಯೂ ಬೀರುತ್ತಿದೆ. ಕಾವೇರಿ ನದಿಪಾತ್ರದಲ್ಲಿಯೂ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದ್ದು, ನದಿ ತಟದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ.
ನದಿ, ಹಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಾಮರಾಜನಗರ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿವೆ. ಸೇತುವೆಗಳು ಮುಳುಗಡೆಯಾಗಿದ್ದು, ರಸ್ತೆ ಸಂಚಾರ ಕಡಿತಗೊಂಡಿದೆ. ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.