Publish Date: Tue, 04 Apr 2023 (18:50 IST)
Updated Date: Tue, 04 Apr 2023 (18:13 IST)
ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ, ಧೃವನಾರಾಯಣ್ ಪುತ್ರ, ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಇಂದಿನಿಂದ ನಂಜನಗೂಡಿನಲ್ಲಿ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ.. ಪ್ರಚಾರಕ್ಕೂ ಮುನ್ನ ಸ್ವಗ್ರಾಮ ಹೆಗ್ಗವಾಡಿ ಗ್ರಾಮಕ್ಕೆ ಭೇಟಿ ನೀಡಿ, ತಂದೆಯ ಸಮಾಧಿಗೆ ದರ್ಶನ್ ಧೃವನಾರಾಯಣ್ ನಮಸ್ಕರಿಸಿ ಪೂಜೆ ಸಲ್ಲಿಸಿದ್ರು. ಬಳಿಕ ಹೆಗ್ಗವಾಡಿ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ನಮಸ್ಕರಿಸಿದ್ದಾರೆ.. ನಂಜನಗೂಡು ಗ್ರಾಮದ ಬೆಲದಕುಪ್ಪೆ, ಬಂಕಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಲಿರುವ ದರ್ಶನ್ಗೆ ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮಸ್ಥರು ಸಾಥ್ ನೀಡಿದ್ದಾರೆ.