Webdunia - Bharat's app for daily news and videos

Install App

ದಾವಣಗೆರೆ ಗಣೇಶ ಮೆರವಣಿಗೆ ಗಲಾಟೆ ಪ್ರಕರಣ: 48ಮಂದಿಗೆ ಬಿಗ್ ರಿಲೀಫ್

Sampriya
ಬುಧವಾರ, 16 ಅಕ್ಟೋಬರ್ 2024 (21:10 IST)
Photo Courtesy X
ದಾವಣಗೆರೆ: ಸೆಪ್ಟೆಂಬರ್‌ 19ರಂದು ದಾವಣಗೆರೆಯಲ್ಲಿ ಸರ್ಕಲ್‌ವೊಂದರ ಬಳಿ ನಡೆದಿದ್ದ ಕಲ್ಲು ತೂರಾಟ ಪ್ರಕರಣದಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳ ಒಟ್ಟು 48 ಮಂದಿ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಅರಳಿ ಮರ ಸರ್ಕಲ್‌ನಲ್ಲಿ ಗಣೇಶ ವಿಸರ್ಜನೆಗೂ ಮುನ್ನಾ ಅಜಾದ್ ನಗರದ ಮುಖ್ಯ ರಸ್ತೆಯಲ್ಲಿ ಮೊದಲು ಕಲ್ಲು ತೂರಾಟ ನಡೆದಿದೆ. ಮೊದಲು ಕಲ್ಲು ತೂರಾಟ ನಡೆದಿತ್ತು. ಇದರಿಂದ ಪೊಲೀಸ್‌ ಅಧಿಕಾರಿಗಳು ಕೂಡ ಗಂಭೀರ ಗಾಯಗೊಂಡಿದ್ದರು.

ಇದೇ ರೀತಿ ಮೂರು ಕಡೆಗಳಲ್ಲಿ ಕಲ್ಲು ತೂರಾಟ ನಡೆದು,  ಬಳಿಕ ಎಚ್ಚೆತ್ತುಕೊಂಡಿದ್ದ ಪೊಲೀಸರು ನಗರವಿಡೀ ಸಂಚರಿಸಿ, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದರು. ಕಲ್ಲು ತೂರಾಟದ ಕೇಸ್‌ನಲ್ಲಿ ಆರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಪ್ರಕರಣದಡಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ನವಲತ್ತಕ್ಕೂ ಹೆಚ್ಚು ಮಂದಿಯನ್ನು ಅರೆಸ್ಟ್‌ ಮಾಡಲಾಗಿತ್ತು.

ಸೆಪ್ಟೆಂಬರ್ 19ರಂದು ಸಂಜೆ‌ ದಾವಣಗೆರೆ ನಗರದ ಮುದ್ದ ಬೋವಿ ಕಾಲೋನಿ ಹಾಗೂ ವೆಂಕಬೋವಿ ಕಾಲೋನಿಯ ಗಣೇಶನನ್ನು ನಗರದ ಅರಳಿ ಮರ ಸರ್ಕಲ್‌ನಲ್ಲಿ ಮೆರವಣಿಗೆ ಮಾಡುವಾಗ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಸರ್ಕಲ್ ಇನ್ಸ್‌ಪೆಕ್ಟರ್ ಗುರುಬಸವರಾಜ್ ಹಾಗೂ ಕ್ರೈಂ ವಿಭಾಗದ ಪೊಲೀಸ್ ಕಾನ್ಸ್‌ಸ್ಟೇಬಲ್ ರಘು ಎಂಬುವವರಿಗೆ ಗಾಯಗಳಾಗಿತ್ತು.

45ಕ್ಕೂ ಅಧಿಕ ಮಂದಿ ವಿರುದ್ಧ ದಾಖಲಾದ ಪ್ರಕರಣದಲ್ಲಿ ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ಗಲಭೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಸತೀಶ್ ಪೂಜಾರಿಗೂ ಜಾಮೀನು ಸಿಕ್ಕಿದ್ದು, ಇಂದು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ ಎಂದು ತಿಳಿದುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments