Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ

ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ
bangalore , ಶುಕ್ರವಾರ, 7 ಜನವರಿ 2022 (20:38 IST)
ದೇಶದ ಕರೋನಾ ಜೊತೆಗೆ ಒಮಿಕ್ರಾನ್ ದಿನೇ ದಿನೇ ಕೇಂದ್ರ ಏರಿಕೆಯಾಗುತ್ತಿದೆ, ಈ ಹಿನ್ನೆಲೆ ಸರ್ಕಾರವು ಅನೇಕ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ.
ಇದೀಗ ಕೇಂದ್ರ ವಿದೇಶದಿಂದ ಭಾರತಕ್ಕೆ ಆಗಮಿಸುವ ಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನಗಳ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ.
ಈ ಕುರಿತು ಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ಭಾರತದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ದೃಢಪಟ್ಟರೂ 7 ದಿನಗಳ ಕಡ್ಡಾಯ ಹೋಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ.
7 ದಿನಗಳ ಹೋಮ್ ಕ್ವಾರಂಟೈನ್ ಮುಕ್ತಾಯಗೊಂಡ ನಂತರ ಮತ್ತೆ ಆರ್ ಟಿಪಿಸಿಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಗೆ ಒಳಪಟ್ಟು, ಸಿಕ್ಕ ವರದಿಯನ್ನು ಕಡ್ಡಾಯವಾಗಿ ಸುವಿಧ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡುವಂತೆ. ಅದನ್ನು ಆಯಾ ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ಮಾಡುತ್ತವೆ.
ಒಂದು ವೇಳೆ ಪಾಸಿಟಿವ್‌ ಬಂದರೆ ಅವರ ಮಾದರಿಗಳು ಇಂಡಿಯನ್‌ ಸಾರ್ಸ್‌-ಕೋವಿ-2 ಜಿನೋಮಿಕ್ಸ್‌ ಕನ್ಸಾರಿಟಿಂ(INSACOG) ಪ್ರಯೋಗಾಲಯದ ಜೀನೋಮಿಕ್ ಪರೀಕ್ಷೆಗೆ ಕಳುಹಿಸಲು ಆಯ್ಕೆಮಾಡಲಾಗಿದೆ. ಬಳಿಕ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹೊಸ ನಿಯಮಗಳ ಪ್ರಕಾರ, ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ಆನ್‌ಲೈನ್‌ನಲ್ಲಿ ಏರ್ ಸುವಿಧಾ ಪೋರ್ಟಲ್‌ನಲ್ಲಿ ಸ್ವಯಂಘೋಷಣೆ ನಮೂನೆ ಮತ್ತು ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿಯನ್ನು ಸಲ್ಲಿಸಬೇಕು. ವಿಮಾನ ನಿಲ್ದಾಣದಲ್ಲಿಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಾರೆ. ಈ ವೇಳೆ ರೋಗಲಕ್ಷಣಗಳು ತಕ್ಷಣವೇ ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ತೆಗೆದುಕೊಂಡಿಲ್ಲ.ಈ ವೇಳೆ ಪಾಸಿಟಿವ್ ಬಂದರೆ ಅಂತಹ ಸಂಪರ್ಕ ಬಂದಿರುವವರನ್ನು ಗುರುತಿಸಲಾಗಿಲ್ಲ.
ಈ ನಿಯಮ 2022ರ ಜವನರಿ 11 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯ.

Share this Story:

Follow Webdunia kannada

ಮುಂದಿನ ಸುದ್ದಿ

ದೇಶದಲ್ಲಿ 150 ಕೋಟಿ ಕೊರೋನಾ ಡೋಸ್ ವಿತರಣೆ ಪೂರ್ಣ: ಪ್ರಧಾನಿ ಮೋದಿ ​