Daily Horoscope
✕

10 ದಿನದಲ್ಲಿ ಸಮುದಾಯ ಭವನಗಳ ಬಳಕೆ ದರ ನಿಗದಿಪಡಿಸಿ ಎಂದ ಡಿಸಿ

Webdunia
ಗುರುವಾರ, 22 ನವೆಂಬರ್ 2018 (20:48 IST)
ಶಾದಿ ಮಹಲ್ ಹಾಗೂ ಜಿಲ್ಲೆಯಲ್ಲಿರುವ ಸಮುದಾಯ ಭವನಗಳು ಸಾರ್ವಜನಿಕರಿಗೆ ಉಪಯೋಗವಾಗುವ ಹಾಗೆ ಸರ್ಕಾರದಿಂದ ದರ ನಿಗದಿಪಡಿಸಬೇಕಾಗಿದೆ. 10 ದಿನದೊಳಗಾಗಿ ದರ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಖಡಕ್ ಸೂಚನೆ ನೀಡಿದ್ದಾರೆ.

ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಮುದಾಯ ಭವನಗಳ  ಬಾಡಿಗೆ ನಿಗದಿ ಹಾಗೂ ಚರ್ಚ ನವೀಕರಣ ದುರಸ್ತಿಗಳ ಕುರಿತು ಕರೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಆರ್. ವೆಂಕಟೇಶಕುಮಾರ,  ಸರ್ಕಾರದ ಧನ ಸಹಾಯದೊಂದಿಗೆ ಸಂಘ ಸಂಸ್ಥೆಗಳು ಸಮುದಾಯ ಭವನಗಳನ್ನು ನಿರ್ಮಿಸಿವೆ.

ಸರ್ಕಾರ ನಿಗದಿಪಡಿಸುವ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಸಾರ್ವಜನಿಕರಿಂದ ಪಡೆಯಬಾರದು ಎಂದು ತಿಳಿಸಿದರು.
ಸಮುದಾಯ ಭವನಗಳ ದರನಿಗದಿಪಡಿಸಲು ಲೋಕೋಪಯೋಗಿ ಇಲಾಖೆಯವರು ಸಮುದಾಯ ಭವನ ನಿರ್ಮಾಣಗೊಂಡ ವರ್ಷ, ಉಪ ನೋಂದಣಾಧಿಕಾರಿಗಳ ಮಾರ್ಗಸೂಚಿ ದರ, ಸಮುದಾಯ ಭವನದ ವಿಸ್ತೀರ್ಣದ ಮಾಹಿತಿಯನ್ನು ಅಲ್ಪಸಂಖ್ಯಾತ ಇಲಾಖೆಗೆ ನೀಡಬೇಕು. ಇದರ ಆಧಾರದ ಮೇಲೆ ಸಮುದಾಯ ಭವನಗಳ ಬಳಕೆ ದರ ನಿಗದಿಪಡಿಸಲಾಗುವುದು.

ಸಮುದಾಯ ಭವನ ನಿರ್ವಹಿಸುವ ಸಂಘ ಸಂಸ್ಥೆಗಳು ಸಮುದಾಯ ಭವನದಲ್ಲಿ ಅಡುಗೆ ಪಾತ್ರೆ, ಪೀಠೋಪಕರಣ ಇಟ್ಟುಕೊಂಡಿದ್ದಲ್ಲಿ ಅವುಗಳಿಗೂ ಸಹ ಬಳಕೆ ದರ ನಿಗದಿಪಡಿಸಲಾಗುವುದು. ಸಂಘ ಸಂಸ್ಥೆಯವರು ಸಾರ್ವಜನಿಕರು ಸಮುದಾಯ ಭವನವನ್ನು ಬಳಕೆಗೆ ಮನವಿ ಸಲ್ಲಿಸಿದಾಗ ಅವರಿಗೆ ಹೆಚ್ಚುವರಿ ಸೌಲಭ್ಯ ಕಡ್ಡಾಯವಾಗಿ ಪಡೆಯಬೇಕು ಎಂದು ಒತ್ತಾಯಿಸಬಾರದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments