Webdunia - Bharat's app for daily news and videos

Install App

ಚೀರ್4ಇಂಡಿಯಾ ಅಭಿಯಾನದಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಡಿಸಿಎಂ ಕರೆ

Webdunia
ಬುಧವಾರ, 21 ಜುಲೈ 2021 (17:23 IST)
ʼಟೋಕಿಯೋ ಒಲಿಂಪಿಕ್ಸ್ʼ ಕ್ರೀಡಾಕೂಟದಲ್ಲಿನ ಭಾರತೀಯ ಸ್ಫರ್ಧಾಳುಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಭಾರತೀಯ ದೈಹಿಕ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮಟ್ಟದ ವೆಬಿನಾರ್‌ನಲ್ಲಿ ಭಾಗವಹಿಸಿ ಮಾತನಾಡಿದ ಅವರು, 15 ದಿನಗಳ ಕಾಲ ನಡೆಯಲಿರುವ ಈ ಕ್ರೀಡಾಹಬ್ಬದಲ್ಲಿ ನಮ್ಮ ದೇಶದ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಈ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಅಭಿಯಾನದ ಭಾಗವಾಗಿ ತಮ್ಮ ಸಾಮಾಜಿಕ ತಾಣದ ಖಾತೆಗಳಲ್ಲಿ ನಮ್ಮ ಕ್ರೀಡಾಪಟುಗಳಿಗೆ ಚೈತನ್ಯ, ಪ್ರೋತ್ಸಾಹ ತುಂಬುವಂಥ ಬರಹಗಳನ್ನು, ಪೋಸ್ಟ್‌ಗಳನ್ನು ಹಾಕುವ ಮೂಲಕ ದೇಶಪ್ರೇಮ ಮೆರೆಯಬೇಕು ಎಂದು ಡಿಸಿಎಂ ಹೇಳಿದರು.
ಈ ವೆಬಿನಾರ್‌ನಲ್ಲಿ ರಾಜ್ಯದ ಯುವಜನ ಸಬಲೀಕರಣ ಮತ್ತು ಕ್ರೀಡಾ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವಾ, ಮಾಜಿ ಒಲಿಂಪಿಕ್‌ ಕ್ರೀಡಾಪಟು ಪ್ರಮೀಳಾ ಅಯ್ಯಪ್ಪ, ಅರ್ಜುನ ಪ್ರಶಸ್ತಿ ವಿಜೇತ ಜೂಡ್ ಫೆಲಿಕ್ಸ್, ಭಾರತದ ದೈಹಿಕ ಶಿಕ್ಷಣ ಪ್ರತಿಷ್ಠಾನದ ಕಾರ್ಯದರ್ಶಿ ಪಿಯೂಷ್ ಜೈನ್ ಮುಂತಾದವರು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಅಧಿಕಾರದಲ್ಲಿರಲು ನಾಲಾಯಕ್, ಕೇಂದ್ರದಲ್ಲಿರುವುದು ಸಂವಿಧಾನ ವಿರೋಧಿ ಸರ್ಕಾರ: ಗುಡುಗಿದ ಸಿದ್ದರಾಯಯ್ಯ

ಸುಶಾಂತ್ ಸಿಂಗ್ ಮ್ಯಾನೇಜರ್‌ ದಿಶಾ ಸಾಲಿಯಾನ್ ನಿಗೂಢ ಸಾವು ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಹಾವು ಹಿಡಿಯುತ್ತಿದ್ದಾಗ ಅರೆಗಳಿಗೆ ಎಚ್ಚರ ತಪ್ಪಿದ್ದಷ್ಟೇ… ಉರಗ ತಜ್ಞ ಸ್ಥಳದಲ್ಲೇ ಸಾವು: ಶಾಕಿಂಗ್ ವಿಡಿಯೋ ಇಲ್ಲಿದೆ

ಪಿಂಕ್‌ ಲೈನ್‌ ಮೆಟ್ರೊ ಆರಂಭಕ್ಕೆ ದಿನಗಣನೆ: ಒಟ್ಟಿಗೆ ಸವಾರಿ ಮಾಡಿದ ಕೃಷ್ಣ ಭೈರೇಗೌಡ, ತೇಜಸ್ವಿ ಸೂರ್ಯ, Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ