Publish Date: Tue, 27 Aug 2019 (16:36 IST)
Updated Date: Tue, 27 Aug 2019 (16:42 IST)
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟ ರಚನೆ ಹಾಗೂ ಖಾತೆ ಹಂಚಿಕೆ ಬೆನ್ನಲ್ಲೇ ಬಿಜೆಪಿ ಮುಖಂಡರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ.
ಮಾಜಿ ಸಚಿವ ಹಾಗೂ ಬಿಜೆಪಿ ಪ್ರಭಾವಿ ಮುಖಂಡ ಬಿ.ಶ್ರೀರಾಮುಲುಗೆ ಡಿಸಿಎಂ ಹುದ್ದೆ ಕೈ ತಪ್ಪಿದೆ. ಈ ಹಿನ್ನೆಲೆಯಲ್ಲಿ
ಶ್ರೀರಾಮುಲುಗೆ ಡಿಸಿಎಂ ಸ್ಥಾನ ಕೈ ತಪ್ಪಿದ್ದರಿಂದಾಗಿ ಅವರ ಬೆಂಬಲಿಗರು ಪ್ರತಿಭಟನೆ ಹಾದಿ ತುಳಿದಿದ್ದಾರೆ.
ಮೊಳಕಾಲ್ಮೂರು ಕ್ಷೇತ್ರದ ಹಿರೇಹಳ್ಳಿಯಲ್ಲಿ ಪ್ರತಿಭಟನೆ ನಡೆಸಿರೋ ಶ್ರೀರಾಮುಲು ಅಭಿಮಾನಿಗಳು, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ದಾರೆ.
ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದ್ದು, ಕಮಲ ಪಾಳೆಯಕ್ಕೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಪ್ರತಿಭಟನಾಕಾರರು ಬಿಜೆಪಿ ಹೈ ಕಮಾಂಡ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀರಾಮುಲುಗೆ ಡಿಸಿಎಂ ಸ್ಥಾನ ನೀಡುವಂತೆ ಬೆಂಬಲಿಗರಿಂದ ಒತ್ತಾಯ ಕೇಳಿಬಂದಿದೆ.