Publish Date: Sat, 15 Jul 2023 (12:54 IST)
Updated Date: Sat, 15 Jul 2023 (12:59 IST)
ಬೆಂಗಳೂರು : ಇಲ್ಲಿನ ಮೆಟ್ರೋ ಸುರಂಗ ಮಾರ್ಗದ ಕಾಮಗಾರಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಲಕ್ಕಸಂದ್ರ ಸುರಂಗ ಮಾರ್ಗ ಹಾಗೂ ಮಹಾತ್ಮ ಗಾಂಧಿ ರಸ್ತೆಯ ಸುರಂಗ ಮಾರ್ಗದ ಬಳಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲನೆ ನಡೆಸಿದರು. ಕಾಮಕಾರಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಲಕ್ಕಸಂದ್ರ ಮೆಟ್ರೋ ಸುರಂಗ ಮಾರ್ಗ ಕಾಮಗಾರಿ ಪರಿಶೀಲನೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೆಟ್ರೋ ಸುರಂಗ ಕಾಮಗಾರಿ ಉತ್ತಮವಾಗಿ ಸಾಗುತ್ತಿದೆ. ಅಧಿಕಾರಿಗಳು ಎಷ್ಟೇ ಹೇಳಿದರೂ ಕಾಮಗಾರಿಯ ಪ್ರಗತಿಯನ್ನ ನಾನು ಕಣ್ಣಾರೆ ನೋಡ್ಬೇಕು ಅಂತಾ ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದರು.