Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹುಬ್ಬಳ್ಳಿ : ಹಣಕ್ಕಾಗಿ ಬೇಡಿಕೆ ಇಟ್ಟ ವ್ಯಕ್ತಿಯೋರ್ವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯಲ್ಲಿ ಮುನ್ನಾ ಬಾನಿ ಅವರಿಗೆ ಗಂಭೀರ ಗಾಯಗಳಾಗಿವೆ. ಮುನ್ನಾ ಬಾನಿಯ ಮೇಲೆ ಗೌಸ್ ಅಲಿಯಾಸ್ ಬದಕ್ ಗೌಸ್ಯಾ ಮತ್ತು ಸಹಚರರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ನೇಕಾರ ನಗರದ ತಿಮ್ಮಸಾಗರ ರಸ್ತೆಯಲ್ಲಿ ಮುನ್ನಾ ಬಾನಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಲಾಗಿದೆ. ಘಟನೆ ನಂತರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಹಾನಿಯನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಆರೋಪಿಗಳು ನಾಪತ್ತೆಯಾಗಿದ್ದು, ಹಳೇ ಹುಬ್ಬಳ್ಳಿ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.