ಲಾಕ್ ಡೌನ್ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯ ಸರ್ಕಾರ ನಿಗದಿತ ಆಸ್ಪತ್ರೆ ಸೇರಿದಂತೆ ಆಯ್ದಕಡೆಗಳಲ್ಲಿ ಒಂದು ಲಕ್ಷ ಹಾಸಿಗೆಗಳ ವ್ಯವಸ್ಥೆ ಮಾಡಿದೆ.
ವೈದ್ಯರು ಸೇರಿದಂತೆ ಒಟ್ಟು 90 ಸಾವಿರ ವೈದ್ಯಕೀಯ ಸಿಬ್ಬಂದಿಗೆ ತರಬೇತಿ ನೀಡಿ ಕೊರೊನಾ ವೈರಾಣು ನಿಯಂತ್ರಣಕ್ಕೆ ರಾಜ್ಯವನ್ನು ಸಜ್ಜುಗೊಳಿಸಲಾಗಿದೆ. ನಿಯಮ ಮತ್ತು ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಾರ್ವಜನಿಕರು ಸಹಕರಿಸಿದರೆ ಈ ವೈರಾಣುವನ್ನು ನಿಯಂತ್ರಣ ಮಾಡಬಹುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಜೀವ ಎಷ್ಟು ಮುಖ್ಯವೋ ಹಾಗೆ ಜೀವನವೂ ಮುಖ್ಯವಾಗಿದ್ದು, ಪ್ರಸ್ತುತ ಕೊರೊನಾ ವೈರಾಣುವಿನೊಂದಿಗೆ ಮುನ್ನೆಚ್ಚರಿಕೆಯ ಕ್ರಮಗಳೊಂದಿಗೆ ಬದುಕುವುದು ಅನಿವಾರ್ಯವಾಗಿದೆ ಎಂದಿದ್ದಾರೆ.