ಬಿಹಾರದ ಮೂಲದವಳಾದ ಸಂತ್ರಸ್ತೆ ಕಲಬುರಗಿ ಇಎಸ್ ಐ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ಆಕೆ ರಾತ್ರಿ ಪಾಳೆಯದಲ್ಲಿ ಕೆಲಸ ಮಾಡುವಾಗ ಡೀನ್ ಡಾ. ನಾಗರಾಜ್, ಇಲ್ಲಿ ಕೆಲಸ ಮಾಡಬೇಕು ಎಂದರೆ, ನನ್ನ ಜೊತೆ ಅನೈತಿಕ ಸಂಬಂಧ ಹೊಂದಬೇಕು. ಇಲ್ಲವಾದರೆ ಕೆಲಸದಿಂದ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಮಹಿಳೆ ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದರೆ ಈ ವೈದ್ಯ ನಾಗರಾಜ್ ಕನ್ನಡದ ಖ್ಯಾತ ನಟನ ಸಹೋದರಾನಾಗಿದ್ದು, ಹೀಗಾಗಿ ಪೊಲೀಸರು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಂತ್ರಸ್ತೆ ಅಳಲು ತೋಡಿಕೊಂಡಿದ್ದಾರೆ.