Publish Date: Fri, 29 Oct 2021 (21:52 IST)
Updated Date: Fri, 29 Oct 2021 (21:57 IST)
ನಟ ಪುನೀತ್ ರಾಜ್‌ಕುಮಾರ್ ನಿಧನದಿಂದಾಗಿ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ ಅ.31ರ ಮಧ್ಯರಾತ್ರಿ 12 ರವರಗೆ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಅ. 29ರಿಂದ ಅ.31ರ ರಾತ್ರಿ 12 ಗಂಟೆಯವರೆಗೆ ಎಲ್ಲಾ ಬಾರ್ ಹಾಗೂ ರೆಸ್ಟೋರೆಂಟ್, ಮದ್ಯದಂಗಡಿ ಹಾಗೂ ಇತರೆಡೆ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಯಾರಾದರೂ ಮದ್ಯ ಮಾರಾಟಕ್ಕೆ ಯತ್ನಿಸಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
ಹೊರ ರಾಜ್ಯ ಹಾಗೂ ರಾಜ್ಯದ ಹೊರ ಜಿಲ್ಲೆಗಳಿಂದ ಪುನೀತ್ ರಾಜ್‌ಕುಮಾರ್ ಅವರ ಅಭಿಮಾನಿಗಳು ನಗರಕ್ಕೆ ಬರಲಿದ್ದಾರೆ. ಆಸ್ಪತ್ರೆಗಳು, ಸದಾಶಿವನಗರದಲ್ಲಿರುವ ನಟನ ಮನೆ ಹಾಗೂ ವಿವಿಧ ಪ್ರದೇಶಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಾಮಾಜಿಕ ಮಾಧ್ಯಮಗಳನ್ನು ಸುಳ್ಳು ಸುದ್ದಿ ಹಬ್ಬಿಸಲು ಕೆಲವರು ಯತ್ನಿಸಿರುವ ಸಾಧ್ಯತೆ ಇದ್ದು, ಈ ಬಗ್ಗೆ ನಿಗಾ ವಹಿಸಲಾಗಿದೆ ಎಂದೂ ಆದೇಶದಲ್ಲಿ ಹೇಳಲಾಗಿದೆ.