Publish Date: Thu, 16 Apr 2020 (18:21 IST)
Updated Date: Thu, 16 Apr 2020 (18:23 IST)
ಕೆಲಸ ಮಾಡುತ್ತಿದ್ದಾಗಲೇ ಸರಕಾರಿ ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕರೊಬ್ಬರು ಸಾವನ್ನಪ್ಪಿದ್ದಾರೆ.
ಸರ್ಜನ್ ಡಾ.ಅನಿಲ್ ಕುಮಾರ್ ಮಧ್ಯಾಹ್ನ ತೀವ್ರ ಹೃದಯಾಘಾದಿಂದ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಸರ್ಜನ್ ಆಗಿದ್ದ ಡಾ.ವಿಜಯ ಕುಮಾರ್ ಕೋಲಾರಕ್ಕೆ ವರ್ಗಾವಣೆಗೊಂಡಿದ್ದರು. ಡಾ.ಅನಿಲ್ ಕುಮಾರ್ ಸುಮಾರು ಎಂಟು ತಿಂಗಳಿಂದ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಕೋವಿಡ್-19 ತಡೆಯುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಿ ನಗರದ ಹಳೆ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಆಸ್ಪತ್ರೆಯನ್ನು ತೆರೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕೋವಿಡ್ -19 ಸೋಂಕು ನಿಯಂತ್ರಣಕ್ಕಾಗಿ ಸಾಕಷ್ಟು ಶ್ರಮ ವಹಿಸಿ ಕಾರ್ಯನಿರ್ವಹಿಸುತ್ತಿದ್ದ ಡಾ.ಅನಿಲ್ ಕುಮಾರ್ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಮೃತ ಪಟ್ಟಿದ್ದಾರೆ.